ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆಯ 30 ಪ್ರಯೋಜನಗಳು

Featured Article

ಚಳಿಗಾಲದಲ್ಲಿ ಕೊಬ್ಬರಿ ಎಣ್ಣೆಯ ಪ್ರಯೋಜನಗಳು ಒಂದು ಚಮಚ ತೆಂಗಿನ ಎಣ್ಣೆಯನ್ನು ನಿಮ್ಮ ಅಂಗೈಗೆ ಹಾಕಿಕೊಂಡು ಅದನ್ನು ನಿಮ್ಮ ಮುಖ ಮತ್ತು ಕತ್ತಿನ ಭಾಗಕ್ಕೆ ನಿಧಾನವಾಗಿ ಮಸಾಜ್ ಮಾಡಿ ದೇಹ ದಲ್ಲಿನ ಸತ್ತ ಚರ್ಮ ವನ್ನು ತೆಗೆದುಹಾಕಿ ಚರ್ಮ ಹೊಳೆಯುವಂತೆ ಮಾಡುತ್ತದೆ.

ತೆಂಗಿನಕಾಯಿ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ದೇಹ ದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಜೊತೆಗೆ ಜೀರ್ಣ ಶಕ್ತಿಯನ್ನು ವೃದ್ಧಿಸುತ್ತದೆ. ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ. ಹೌದು, ಕೊಬ್ಬರಿ ಎಣ್ಣೆಯಲ್ಲಿ ಒಗ್ಗರಣೆ ಮಾಡಿದ ಆಹಾರವನ್ನು ಸೇವಿಸುವ ಮೂಲಕ ಮರೆತ ವಿಷಯಗಳನ್ನು ನೆನಪಿಸಿಕೊಳ್ಳುವ ಕ್ಷಮತೆ ಹೆಚ್ಚುತ್ತದೆ.

ಇವು ಮೆದುಳಿಗೂ ಸುಲಭವಾಗಿ ತಲುಪಿ ಮೆದುಳಿನ ಜೀವಕೋಶಗಳಿಗೆ ಹೆಚ್ಚಿನ ಶಕ್ತಿ ದೊರಕುತ್ತದೆ.ಹಾಗೂ ತನ್ಮೂಲಕ ಸ್ಮರಣ ಶಕ್ತಿ ಹೆಚ್ಚುತ್ತದೆ.ಇದು ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ ಹಾಗೂ ಕೆಟ್ಟ ಕೊಲೆ ಸ್ಟಾಲ್ ಗಳನ್ನು ಒಳ್ಳೆಯ ಕೊಲೆಸ್ಟ್ರಾಲ್ ಆಗಿ ಪರಿವರ್ತಿಸಲು ನೆರವಾಗುತ್ತದೆ. ಸ್ವಲ್ಪ ಕೊಬ್ಬರಿ ಎಣ್ಣೆಯಿಂದ ಬಾಯಿಯನ್ನು ಮುಕ್ಕಳಿಸುವುದರಿಂದ ವಸಡಿನ ಸಮಸ್ಯೆ ಮಾಯವಾಗುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ಕೊಬ್ಬರಿ ಎಣ್ಣೆಯನ್ನು ಅಡುಗೆಯಲ್ಲಿ ಬಳಸಿದ ರೆ ಉಪಯೋಗಕಾರಿ ಎಂದು ಹೇಳುತ್ತಾರೆ. ಕೊಬ್ಬರಿ ಎಣ್ಣೆಯ ಮಸಾಜ್ ಮಾಡುವುದರಿಂದ ದೇಹದಲ್ಲಿ ರಕ್ತ ಸಂಚಲನ ಚೆನ್ನಾಗಿ ಆಗುತ್ತದೆ ಹಾಗೂ ಚರ್ಮಕ್ಕೂ ಕೂಡ ಒಳ್ಳೆಯದು. ಕೂದಲಿಗೆ ವಾರದಲ್ಲಿ ಎರಡು ಬಾರಿ ಆದರೂ ಕೊಬ್ಬರಿ ಎಣ್ಣೆಯ ಮಸಾಜ್ ಮಾಡಿ.

ಇದು ಕೂದಲ ನ್ನು ಉದ್ದವಾಗಿ ಬೆಳೆಯಲು ಹಾಗು ಕೂದಲಿನ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ತುಟಿ ಗಳು ಒಣಗುತ್ತಿದ್ದರೆ ಅಥವಾ ಒಡೆದಿದ್ದರೆ ಒಂದು ಚಿಟಿಕೆ ಕೊಬ್ಬರಿ ಎಣ್ಣೆ ತೆಗೆದುಕೊಂಡು ತುಟಿಗಳಿಗೆ ಹಚ್ಚಿ ಮಸಾಜ್ ಮಾಡಿ ಸುಟ್ಟ ಕಲೆಗಳು ಹಾಗು ಯಾವುದಾದರು ಸ್ಟ್ರೇಚ್ ಮಾರ್ಕ್ ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿದರೆ ಕ್ರಮೇಣ ಕಲೆಗಳ ಸಮಸ್ಯೆಯಿಂದ ಮುಕ್ತಿ ದೊರಕುತ್ತದೆ.

ರಾತ್ರಿ ಮುಖಕ್ಕೆ ಸ್ವಲ್ಪ ಕೊಬ್ಬರಿ ಎಣ್ಣೆ ಹಾಗು ಅಲೋವೇರಾ ಹಚ್ಚಿ ಮಲಗುವುದ್ರಿಂದ ಕಪ್ಪು ಕಲೆಗಳು ಮಾಯವಾಗುತ್ತವೆ.ರಾತ್ರಿ ಮಲಗುವ ಮುನ್ನ ಸ್ವಲ್ಪ ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಹಿಮ್ಮಡಿಗಳಿಗೆ ಹಚ್ಚಿದರೆ ಹಿಮ್ಮಡಿ ಒಡೆಯುವುದನ್ನು ತಪ್ಪಿಸಬಹುದು. ನಮ್ಮ ಆಹಾರ ದಲ್ಲಿರುವ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣ ಕೊಬ್ಬರಿ ಎಣ್ಣೆಯಲ್ಲಿದೆ. ಹಾಗಾಗಿ ಇದನ್ನು ಅಡುಗೆಯಲ್ಲಿ ಬಳಸಬಹುದು.

Leave a Reply

Your email address will not be published. Required fields are marked *